Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ,ಸೆಪ್ಟಂಬರ್,8,2023(www.justkannada.in): ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಾಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೆ ಈ ಕುರಿತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಅಂದರು ನಂತರ ಅದಕ್ಕೆ ಬ್ರೇಕ್ ಆಯ್ತು. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಹೋರಾಟ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ.

ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು, ಅನಾನುಕೂಲವಾದಾಗ ಮೈತ್ರಿಯಿಂದ ಹಿಂದೆ ಸರಿಯುವುದು. ಈ ರೀತಿ ಮಾಡಿದಾಗ ಜನರ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಜೊತೆಗೆ ಆಯಾ ಪಕ್ಷಗಳ ಕ್ರೆಡಿಬಿಲಿಟಿ ಸಹ ಹೋಗುತ್ತೆ ಎಂದು ಜಗದೀಶ್ ಶೆಟ್ಟರ್ ಟಾಂಗ್ ನೀಡಿದರು.

Key words: Former CM -Jagdish Shettar -BJP-JDS -alliance – Lok Sabha- elections