Thursday, August 20, 2026

BDA Apartments

Home Front Page ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ: ಎಚ್ಚರಿಕೆ ವಹಿಸಲು ಸಿಎಂ ಸಿದ್ಧರಾಮಯ್ಯ ಮನವಿ.

ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ: ಎಚ್ಚರಿಕೆ ವಹಿಸಲು ಸಿಎಂ ಸಿದ್ಧರಾಮಯ್ಯ ಮನವಿ.

ಬೆಂಗಳೂರು,ಸೆಪ್ಟಂಬರ್,11,2023(www.justkannada.in):  ರಾಜ್ಯದಾದ್ಯಂತ ಕೆಲ ದಿನಗಳಿಂದ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಎಚ್ಚರಿಕೆವಹಿಸುವಂತೆ ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಕುರಿತು ಫೇಸ್‌ಬುಕ್ ಪೋಸ್ಟ್ ಮಾಡಿರುವ ಸಿಎಂ ಸಿದ್ಧರಾಮಯ್ಯ, ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ.

Key words: More than -7 thousand -dengue cases – state- CM Siddaramaiah