Sunday, September 20, 2026

BDA Apartments

ಮೈತ್ರಿ ಬಗ್ಗೆ ದೆಹಲಿ ಸಭೆಯಲ್ಲಿ ಚರ್ಚೆಯಾಗಿಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ...
Home Front Page ಮೈತ್ರಿ  ಬಗ್ಗೆ ದೆಹಲಿ ಸಭೆಯಲ್ಲಿ ಚರ್ಚೆಯಾಗಿಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಮೈತ್ರಿ  ಬಗ್ಗೆ ದೆಹಲಿ ಸಭೆಯಲ್ಲಿ ಚರ್ಚೆಯಾಗಿಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಸೆಪ್ಟಂಬರ್,14,2023(www.justkannada.in): ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆಯಲ್ಲಿ  ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚೆಯಾಗಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಇಂದು ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ,  ವರಿಷ್ಠರ ಜೊತೆ ರಾಜ್ಯ ರಾಜಕೀಯ ವಿಚಾರದ ಬಗ್ಗೆ ಚರ್ಚೆಯಾಗಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಮೈತ್ರಿಗೆ ರಾಜ್ಯ ಬಿಜೆಪಿ ನಾಯಕರ ಆಕ್ಷೇಪ ಅಂತಾ ಏನೂ ಇಲ್ಲ. ಆದರೆ ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ನೋಡಬೇಕು. ಇದರಲ್ಲಿ ವೈಯಕ್ತಿಕ ಅಭಿಪ್ರಾಯ ಏನೂ ಇರುವುದಿಲ್ಲ ಎಂದರು.ಮೈತ್ರಿ ಬಗ್ಗೆ ದೆಹಲಿ ಸಭೆಯಲ್ಲಿ ಚರ್ಚೆಯಾಗಿಲ್ಲ bsy

ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಬಿಡಬಾರದು.

ತಮಿಳುನಾಡಿಗೆ ನೀರು ಹರಿಸುವಂತೆ ಪ್ರಾಧಿಕಾರ ಆದೇಶ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ,  ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಕೂಡ ಬಿಡಬಾರದು. ನೀರು ಬಿಟ್ಟು ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧ ಮಾಡಿದೆ. ಕೂಡಲೇ ಸರ್ಕಾರ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Key words: Alliance -not -discussed – Delhi meeting- Former CM -BS Yeddyurappa.