Sunday, August 23, 2026

BDA Apartments

Home Front Page ಮುಂದಿನ ಒಂದು ವಾರ ಉತ್ತಮ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಒಂದು ವಾರ ಉತ್ತಮ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಸೆಪ್ಟೆಂಬರ್ 18, 2023 (www.justkannada.in): ಮಳೆ ಕೊರತೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ಕೊಂಚ ಸಮಾಧಾನದ ಸುದ್ದಿ ಸಿಕ್ಕಿದೆ.

ಹೌದು. ಮುಂದಿನ ಒಂದು ವಾರದ ಅವಧಿಯಲ್ಲಿ ರಾಜ್ಯದ ಕೆಲವೆಡೆ ತೀವ್ರವಾಗಿ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್ ಹಾಗೂ ಯಾದಗಿರಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆ ತೀವ್ರತೆ ಪಡೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಸೋಮವಾರ ಗುಡುಗು ಸಹಿತ ಮಳೆಯಾಗಿದೆ.

ಬೆಂಗಳೂರರಲ್ಲಿ ಮೋಡ ಕವಿದ ವಾತಾವರಣ ಇದ್ದು, ಇಂದು ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.