Saturday, August 22, 2026

BDA Apartments

Home Front Page ತಮಿಳುನಾಡಿಗೆ ಮತ್ತೆ ನೀರು ಬಿಡಲು ಆದೇಶ:  ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ- ಸರ್ಕಾರಕ್ಕೆ ಮಾಜಿ ಸಿಎಂ...

ತಮಿಳುನಾಡಿಗೆ ಮತ್ತೆ ನೀರು ಬಿಡಲು ಆದೇಶ:  ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ- ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ವೈ ಒತ್ತಾಯ.

ಬೆಂಗಳೂರು,ಸೆಪ್ಟಂಬರ್,19,2023(www.justkannada.in): ತಮಿಳುನಾಡಿಗೆ ಮತ್ತೆ  5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹಿನ್ನಲೆ, ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, 5ಸಾವಿರ ಕ್ಯೂಸೆಕ್ ನೀರು ಬಿಡಲು ಸಾಧ್ಯವಿಲ್ಲ.  ಸರಿಯಾಗಿ ಮಳೆಯಾಗದೇ ಈಗಾಗಲೇ ಜಲಾಶಯಗಳು ಖಾಲಿ ಖಾಲಿಯಿವೆ. ಬೆಂಗಳೂರಿಗರಿಗೆ ಕುಡಿಯುವ ನೀರಿಗೆ ಸಮಸ್ಯೆ  ಇದೆ. ನೀರು ಬಿಡುವ ಸ್ಥಿತಿ  ಇಲ್ಲ ಅಂತಾ  ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಮನದಟ್ಟು ಮಾಡಲಿ ಎಂದು ಆಗ್ರಹಿಸಿದರು.

Key words: release -water – Tamil Nadu- again-  government- former CM-BS yeddyurappa