Thursday, November 12, 2026

Dasara Wishes

Happy Dasara
Home Front Page ಜೆಡಿಎಸ್- ಬಿಜೆಪಿ ಮೈತ್ರಿ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ..

ಜೆಡಿಎಸ್- ಬಿಜೆಪಿ ಮೈತ್ರಿ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ..

ಸಿದ್ದರಾಮಯ್ಯ ವಿರುದ್ದದ ಸ್ಟಿಂಗ್‌ ಸಂಚಿನಲ್ಲಿ ಶಾಮೀಲಾದ ʼನೀಲಿಕಣ್ಣಿನ ಮಂತ್ರಿʼ- ಹೆಚ್.ಡಿಕೆ ವಾಗ್ದಾಳಿ

ಚನ್ನಪಟ್ಟಣ,ಸೆಪ್ಟಂಬರ್,20,2023(www.justkannada.in):  ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಸದ್ದು ಮಾಡುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್- ಬಿಜೆಪಿ ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಸಭೆ ಇದೆ. ಸಭೆಯಲ್ಲಿ ಚರ್ಚಿಸಿದ  ಬಳಿಕ ಇದರ ವಾಸ್ತವಾಂಶ ಹೊರಗೆ ಬರುತ್ತದೆ. ಸೀಟು ಹೊಂದಾಣಿಕೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ತಿಳಿಸಿದರು.ಸಿದ್ದರಾಮಯ್ಯ ವಿರುದ್ದದ ಸ್ಟಿಂಗ್‌ ಸಂಚಿನಲ್ಲಿ ಶಾಮೀಲಾದ ʼನೀಲಿಕಣ್ಣಿನ ಮಂತ್ರಿʼ- ಹೆಚ್.ಡಿಕೆ ವಾಗ್ದಾಳಿ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೆಟ್ಟದಾಗಿ ನಡೆದುಕೊಂಡಿದೆ.  ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಬಲಾಢ್ಯ ಆಗಿರಬೇಕು. ಈ ನಿಟ್ಟಿನಲ್ಲಿ ನಾಳೆ ಚರ್ಚೆಯಾಗಲಿದೆ ಎಂದು ಹೆಚ್.ಡಿಕೆ ತಿಳಿಸಿದರು.

Key words: JDS-BJP -alliance – under- discussion – Former CM- HD Kumaraswamy.