Saturday, August 22, 2026

BDA Apartments

Home Front Page ತಮಿಳುನಾಡಿಗೆ ನೀರು ಹರಿಸಿ ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರದಿಂದ ದ್ರೋಹ –ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

ತಮಿಳುನಾಡಿಗೆ ನೀರು ಹರಿಸಿ ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರದಿಂದ ದ್ರೋಹ –ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ. ​

ಹುಬ್ಬಳ್ಳಿ,ಸೆಪ್ಟಂಬರ್,21,2023(www.justkannada.in):  ರಾಜ್ಯದಲ್ಲಿ ಮಳೆಯಾಗದೇ ಕೆಆರ್ ಎಸ್ ಜಲಾಶಯದಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶಿಸಿರುವ  ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಮಿಳುನಾಡಿಗೆ ನೀರು ಹರಿಸಿ ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರ ದ್ರೋಹ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದ ರೈತರನ್ನು ಬಲಿಕೊಟ್ಟು ಕಾಂಗ್ರೆಸ್ ಸರ್ಕಾರ ದ್ರೋಹ ಮಾಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ವಿಸರ್ಜನೆ ‌ಮಾಡಬೇಕು. ನಮಗೆ ಕುಡಿಯೋಕೆ ನೀರಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ‌ಪರಿಸ್ಥಿತಿಯನ್ನು ಕಾಂಗ್ರೆಸ್ ತಂದಿಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

Key words:  Congress- government –caveri-water- Tamil Nadu-MLA- Basan Gowda Patil Yatnal