ನವದೆಹಲಿ,ಸೆಪ್ಟಂಬರ್,22,2023(www.justkannada.in): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಅಧಿಕೃತವಾಗಿದ್ದು ಇದೀಗ ಜೆಡಿಎಸ್ ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಾಗಿದೆ.
ಇಂದು ಬಿಜೆಪಿ ನೇತೃತ್ವದ ಎನ್ ಡಿಎಗೆ ಜೆಡಿಎಸ್ ಸೇರಿದೆ. ಈ ಸಂಬಂಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚಿಸಿದರು.
ನಂತರ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ “ನಮ್ಮ ಹಿರಿಯ ನಾಯಕ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದವು. ಜೆಡಿಎಸ್ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಸಂತೋಷವಾಗಿದೆ. ನಾವು ಅವರನ್ನು ಎನ್ ಡಿಎಗೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದರು.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, ಎನ್ ಡಿಎ ಕುಟುಂಬಕ್ಕೆ ಜೆಡಿಎಸ್ ಗೆ ಹೃತ್ಪೂರ್ವಕ ಸ್ವಾಗತ ಎಂದು ಉಲ್ಲೇಖಿಸಿದ್ದಾರೆ.
Key words: JDS- joins -NDA alliance- JP Nadda -official announcement






