Tuesday, September 22, 2026

BDA Apartments

Home Front Page ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತ: ಸೀಟು ಹೊಂದಾಣಿಕೆ ಬಗ್ಗೆ ಭಿನ್ನಾಭಿಪ್ರಾಯವಿಲ್ಲ- ಮಾಜಿ ಸಿಎಂ ಹೆಚ್.ಡಿಕೆ.

ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತ: ಸೀಟು ಹೊಂದಾಣಿಕೆ ಬಗ್ಗೆ ಭಿನ್ನಾಭಿಪ್ರಾಯವಿಲ್ಲ- ಮಾಜಿ ಸಿಎಂ ಹೆಚ್.ಡಿಕೆ.

ಬೆಂಗಳೂರು,ಸೆಪ್ಟಂಬರ್,23,2023(www.justkannada.in): ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ. ಸೀಟು ಹೊಂದಾಣಿಕೆ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರಿನ  ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ,  ಮೈತ್ರಿ ಬಗ್ಗೆ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ. ಲಾಂಗ್ ರಿಲೇಷನ್ ಶಿಪ್ ಮುಂದುವರೆಸುವ ಬಗ್ಗೆ ಚರ್ಚೆಗಳು ನಡೆದಿವೆ. ನಾಡಿನ ಜನತೆ ಹಿತರಕ್ಷಣೆ ದೃಷ್ಟಿಯಿಂದ ಕೆಲ ವಿಷಯಗಳು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ದಸರಾ ಹಬ್ಬದ ನಂತರ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಮಾತನಾಡಲಿದ್ದಾರೆ ಎಂದರು.ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತ hdk

ಇನ್ನು ಕಾವೇರಿ ಹೋರಾಟಕ್ಕೆ ಬೆಂಬಲ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ,  ನಾನು ಈಗ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಜೆಡಿಎಸ್ ಬೆಂಬಲ ಕೊಟ್ಟಿದ್ದೇವೆ. ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದರು.

Key words: Alliance- issue –amicable- No disagreement – seat adjustment- Former CM- HDK.