Sunday, August 23, 2026

BDA Apartments

Home Front Page ಕರ್ನಾಟಕ ಅಂಡರ್ 19 ತಂಡದಲ್ಲಿ ಸ್ಥಾನ ಪಡೆದ ರಾಹುಲ್ ದ್ರಾವಿಡ್ ಪುತ್ರ ಸಮಿತ್

ಕರ್ನಾಟಕ ಅಂಡರ್ 19 ತಂಡದಲ್ಲಿ ಸ್ಥಾನ ಪಡೆದ ರಾಹುಲ್ ದ್ರಾವಿಡ್ ಪುತ್ರ ಸಮಿತ್

ಬೆಂಗಳೂರು, ಸೆಪ್ಟೆಂಬರ್ 26, 2023 (www.justkannada.in): ಟೀಂ ಇಂಡಿಯಾ ಕೋಚ್‌ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಕರ್ನಾಟಕ ಅಂಡರ್ 19 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅಂದಹಾಗೆ ಜನವರಿಯಲ್ಲಿ ನಡೆದ 14 ವರ್ಷದೊಳಗಿನವರ ಅಂತರ ವಲಯ ಟೂರ್ನಿಯಲ್ಲಿ ರಾಹುಲ್ ಅವರ ಮತ್ತೊಬ್ಬ ಪುತ್ರ ಅನ್ವಯ್ ದ್ರಾವಿಡ್ ಅಂಡರ್ 14 ಕರ್ನಾಟಕ ತಂಡದ ನಾಯಕರಾಗಿದ್ದರು.

2019-20ರ ಅಂತರ ವಲಯ ಪಂದ್ಯಗಳಲ್ಲಿ ಅನ್ವಯ್ 2 ದ್ವಿಶತಕ ಹೊಡೆದಿದ್ದರು. ಇದೀಗ ವಿನೂ ಮಂಕಡ್ ಟೂರ್ನಿಗಾಗಿ ಆಯ್ಕೆ ಮಾಡಲಾದ ಕರ್ನಾಟಕದ 15 ಸದಸ್ಯರ ತಂಡದಲ್ಲಿ 17 ವರ್ಷದ ಸಮಿತ್ ಸ್ಥಾನ ಪಡೆದಿದ್ದಾರೆ.

ವಿನೂ ಮಂಕಡ್ ಟೂರ್ನಿಯು ಅಕ್ಟೋಬರ್ 12 ರಿಂದ ಶುರುವಾಗಲಿದ್ದು, ಕರ್ನಾಟಕ ಅಂಡರ್ 19 ತಂಡವನ್ನು ಧೀರಜ್ ಗೌಡ ಮುನ್ನಡೆಸಲಿದ್ದಾರೆ.