Friday, September 25, 2026

BDA Apartments

Home Front Page ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ:  ಬಲವಂತವಾಗಿ ಬಂದ್ ಮಾಡಿಸಿದ್ರೆ ಕಾನೂನು ಕ್ರಮ – ಪೊಲೀಸ್ ಆಯುಕ್ತ...

ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ:  ಬಲವಂತವಾಗಿ ಬಂದ್ ಮಾಡಿಸಿದ್ರೆ ಕಾನೂನು ಕ್ರಮ – ಪೊಲೀಸ್ ಆಯುಕ್ತ ಬಿ.ದಯಾನಂದ್.

ಬೆಂಗಳೂರು,ಸೆಪ್ಟಂಬರ್,28,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ, ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಾಗಲಿದ್ದು,  ಬಲವಂತವಾಗಿ ಬಂದ್ ಮಾಡಿಸಿದ್ರೆ ಕಾನೂನು ಕ್ರಮ  ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಬಿ.ದಯಾನಂದ್,  ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೆ ಬರಲಿದೆ.  ನಾಳೆ ಪ್ರತಿಭಟನೆ, ರ್ಯಾಲಿಗಳಿಗೆ ಅವಕಾಶವಿಲ್ಲ ಫ‍್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.  ಎಲ್ಲಾ ಸಂಘಟನೆಗಳಿಗ ಸೂಚನೆ ನೀಡಲಾಗಿದೆ ಎಂದರು.ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ: ಬಲವಂತವಾಗಿ ಬಂದ್ ಮಾಡಿಸಿದ್ರೆ ಕಾನೂನು ಕ್...

ನಗರದ ಸೂಕ್ಷ್ಮಪ್ರದೇಶದಲ್ಲಿ ಹೆಚ್ಚಿನ ಭಧ್ರತೆ ವಹಿಸಲಾಗಿದೆ.  ಐದಕ್ಕಿಂತ ಹೆಚ್ಚು ಜನ ಓಡಾಡುವ ಆಗಿಲ್ಲ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿ.ದಯಾನಂದ್ ತಿಳಿಸಿದ್ದಾರೆ.

Key words: Implementation – Section 144 – Bengaluru- Karnataka bandh-Police Commissioner- B.Dayanand.