Saturday, August 1, 2026

BDA Apartments

Home Crime ಸಾಹಿತಿಗಳು ಮತ್ತು ಚಿಂತಕರಿಗೆ ಬೆದರಿಕೆ ಪತ್ರಗಳನ್ನ ಬರೆದಿದ್ದ ಆರೋಪಿಯ ಬಂಧನ.

ಸಾಹಿತಿಗಳು ಮತ್ತು ಚಿಂತಕರಿಗೆ ಬೆದರಿಕೆ ಪತ್ರಗಳನ್ನ ಬರೆದಿದ್ದ ಆರೋಪಿಯ ಬಂಧನ.

ಬೆಂಗಳೂರು ಸೆಪ್ಟಂಬರ್,30,2023(www.justkannada.in): ಲೇಖಕರು, ಚಿಂತಕರು, ಸಾಹಿತಿಗಳಿಗೆ ಬೆದರಿಕೆ ಪತ್ರಗಳನ್ನು ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಮೂಲದ ಶಿವಾಜಿರಾವ್ ಜಾಧವ್ ಬಂಧಿತ ಆರೋಪಿ.  ಶಿವಾಜಿರಾವ್ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದು,  ಶಿವಾಜಿರಾವ್ ನನ್ನ ಸಿಸಿಬಿ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಿ ಎಲ್ ವೇಣು, ಬಂಜಗೇರಿ ಜಯಪ್ರಕಾಶ್, ಬಿ.ಟಿ ಲಲಿತಾ ನಾಯಕ್, ವಸುಂಧರ ಭೂಪತಿ ಅವರಿಗೆ ಬೆದರಿಕೆ ಪತ್ರ ಬರೆದಿದ್ದನು. ರಾಜ್ಯದ ಬೇರೆ ಬೇರೆ ಕಡೆ 8 ಪ್ರಕರಣಗಳು ದಾಖಲಾಗಿದ್ದವು.

ಸದ್ಯ ಸಿಸಿಬಿ ಪೊಲೀಸರು ಶಿವಾಜಿರಾವ್​ ಹಿನ್ನೆಲೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಶಿವಾಜಿರಾವ್​ ಇದುವರೆಗೂ ಏಳು ಪತ್ರಗಳನ್ನು ಬರೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಆರೋಪಿಯನ್ನ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Arrest -accused – wrote- threatening letters – writers – thinkers.