Tuesday, September 22, 2026

BDA Apartments

ವಿಶ್ವಕಪ್ ಕ್ರಿಕೆಟ್: ಟೀಂ ಇಂಡಿಯಾ-ಇಂಗ್ಲೆಂಡ್ ಅಭ್ಯಾಸ ಪಂದ್ಯ BDA JK_Adv BDA Adv
Home Front Page ವಿಶ್ವಕಪ್ ಕ್ರಿಕೆಟ್: ಟೀಂ ಇಂಡಿಯಾ-ಇಂಗ್ಲೆಂಡ್ ಅಭ್ಯಾಸ ಪಂದ್ಯ

ವಿಶ್ವಕಪ್ ಕ್ರಿಕೆಟ್: ಟೀಂ ಇಂಡಿಯಾ-ಇಂಗ್ಲೆಂಡ್ ಅಭ್ಯಾಸ ಪಂದ್ಯ

ಬೆಂಗಳೂರು, ಸೆಪ್ಟೆಂಬರ್ 30, 2023 (www.justkannada.in): ವಿಶ್ವಕಪ್ ಕ್ರಿಕೆಟ್ ಅಭಿಯಾನ ಆರಂಭಿಸಲಿರುವ ಟೀಂ ಇಂಡಿಯಾ ಇಂದು ಪ್ರಬಲ ತಂಡವಾಗಿರುವ ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯವಾಡಲಿದೆ.

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯಗಳು ಆರಂಭವಾಗಿದ್ದು, ಇಂದು ಆತಿಥೇಯ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಪಂದ್ಯವಾಡಲಿದೆ.

ಅಂದಹಾಗೆ ರೋಹಿತ್ ಪಡೆಗೆ ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅಭ್ಯಾಸಕ್ಕೆ ಸೂಕ್ತ ವೇದಿಕೆ ಸಿಕ್ಕಿದೆ. ಭಾರತ ತಂಡ ಈಗಾಗಲೇ ವಿಶ್ವಕಪ್ ಗೆ ಎಲ್ಲ ಯೋಜನೆ ಮಾಡಿಕೊಂಡಿದೆ. ಈಗ ಪ್ರಬಲ ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯವೂ ಮುಂದಿನ ಹಂತದಲ್ಲಿ ಉತ್ತಮ ತಯಾರಿಗೆ ಅವಕಾಶ ಮಾಡಿಕೊಡಲಿದೆ.

ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.