Friday, August 14, 2026

BDA Apartments

Home Front Page 2024ರಲ್ಲಿ ಮತ್ತೆ ಅಧಿಕಾರಕ್ಕೆ ಬರುವೆ: ಪ್ರಧಾನಿ ನರೇಂದ್ರ ಮೋದಿ

2024ರಲ್ಲಿ ಮತ್ತೆ ಅಧಿಕಾರಕ್ಕೆ ಬರುವೆ: ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು, ಅಕ್ಟೋಬರ್ 01, 2023 (www.justkannada.in): 2024ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಂದೇಶವನ್ನು ಪ್ರಧಾನಿ ಮೋದಿ ರವಾನಿಸಿದ್ದಾರೆ.

ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯ ಭಾಗವಾಗಿ 100 ಮಹತ್ವಾಕಾಂಕ್ಷಿ ವಲಯಗಳ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, 2024ರ ಚುನಾವಣೆಯಲ್ಲೂ ಮತ್ತೆ ನಾನೇ ಗೆದ್ದು ಬರುತ್ತೇನೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷ ಅಕ್ಟೋಬರ್ -ನವೆಂಬರ್ ನಲ್ಲಿ ಮಹತ್ವಾಕಾಂಕ್ಷಿ ವಲಯಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳುವ ಮೂಲಕ 2024ರ ಚುನಾವಣೆಯಲ್ಲೂ ಮತ್ತೆ ನಾನೇ ಗೆದ್ದು ಬರುತ್ತೇನೆ ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಜಾರಿಗೆ ತರಲಾದ ಮಹಾತ್ವಾಕಾಂಕ್ಷಿ ಜಿಲ್ಲಾ ಯೋಜನೆಗಳು ಸ್ಪೂರ್ತಿದಾಯಕ ಜಿಲ್ಲೆಗಳಾಗಿ ಹೊರಹೊಮ್ಮಿವೆ. ಮುಂದಿನ ವರ್ಷ ಅಕ್ಟೋಬರ್ -ನವೆಂಬರ್ ನಲ್ಲಿ ಮಹತ್ವಾಕಾಂಕ್ಷಿ ವಲಯಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ ಎಂದು ಮೋದಿ ಹೇಳಿದ್ದಾರೆ.