Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಎಚ್ಡಿಕೆ ಕಾಂಗ್ರೆಸ್ ಸರಕಾರದ ಚಿಂತೆ ಬಿಟ್ಟು ಜೆಡಿಎಸ್ ಬಗ್ಗೆ ಯೋಚಿಸಲಿ: ಸಚಿವ ದಿನೇಶ್ ಗುಂಡೂರಾವ್

ಎಚ್ಡಿಕೆ ಕಾಂಗ್ರೆಸ್ ಸರಕಾರದ ಚಿಂತೆ ಬಿಟ್ಟು ಜೆಡಿಎಸ್ ಬಗ್ಗೆ ಯೋಚಿಸಲಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಅಕ್ಟೋಬರ್ 01, 2023 (www.justkannada.in): ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಭವಿಷ್ಯದ ಬಗ್ಗೆ ಚಿಂತಿಸುವುದನ್ನು ಬಿಟ್ಟು ತಮ್ಮದೇ ಪಕ್ಷದ ಬಗ್ಗೆ ಯೋಚಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ನಮ್ಮ ಸರ್ಕಾರಕ್ಕೆ ರಾಜ್ಯದ ಜನ ನಾವು ನಿರೀಕ್ಷೆ ಮಾಡದಷ್ಟು ಸಂಪೂರ್ಣ ಜನಾದೇಶ ನೀಡಿದ್ದಾರೆ‌.  ನಾವು ಪೂರ್ಣಾವಧಿ ಆಡಳಿತ ನಡೆಸುವುದು ನಿಶ್ಚಿತ. ಇನ್ನೊಬ್ಬರ ಆಸರೆಯಲ್ಲಿ ಸರ್ಕಾರ ರಚಿಸಿಲ್ಲ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ಭವಿಷ್ಯದ ಬಗ್ಗೆ ಚಿಂತಿಸುವುದನ್ನು ಬಿಟ್ಟು ತಮ್ಮದೇ ಪಕ್ಷದ ಬಗ್ಗೆ ಯೋಚಿಸಬೇಕು ಎಂದು ಟೀಕಿಸಿದ್ದಾರೆ.

ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ತಕ್ಷಣವೆ ಹೆಚ್’ಡಿಕೆಗೂ ಆ ಚಾಳಿ ಅಂಟಿಕೊಂಡಂತಿದೆ. ಹೀಗಾಗಿ ಸರ್ಕಾರ ಬೀಳಿಸುವ ಮಾತನಾಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಆರೋಪ: ಮುಂದಿನ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕರನ್ನು ಭೀತಿಗೊಳಗಾಗುವಂತೆ ಮಾಡಲು ಐಟಿ, ಇಡಿ ಮತ್ತು ಸಿಬಿಐ ಅನ್ನು ಬಳಸಿಕೊಳ್ಳಲು ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರಬಹುದು ಎಂದು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.