Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ದಾಖಲೆ ಪರಿಶೀಲನೆ.

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ದಾಖಲೆ ಪರಿಶೀಲನೆ.

ಬೆಂಗಳೂರು,ಅಕ್ಟೋಬರ್,4,2023(www.justkannada.in):  ತೆರಿಗೆ ವಂಚನೆ ಆರೋಪ  ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು ನಗರದ 10ಕ್ಕೂ ಹೆಚ್ಚು ಕಡೆಗಳಲ್ಲಿ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ದಾಖಲೆ ಪರಿಶೀಲನೆ income tax

ತೆರಿಗೆ ವಂಚನೆ ಮಾಡಿರುವ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆ ಮೇಲೆ ದಾಳಿ‌ಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸದ್ಯ ಮನೆ ಹಾಗೂ ಕಚೇರಿಗಳ‌ಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Key words: IT- raid – more than- 10 places – Bangalore- document- verification.