Wednesday, August 19, 2026

BDA Apartments

Home Front Page ನಮ್ಮ ಸರ್ಕಾರ ಹೊಸ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.

ನಮ್ಮ ಸರ್ಕಾರ ಹೊಸ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.

ಚಿತ್ರದರ್ಗ, ಅಕ್ಟೋಬರ್,6,2023(www.justkannada.in):  ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್ ಹಾಗೂ ಸೂಪರ್ ಮಾರ್ಕೆಟ್ ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ ಪರವಾನಗಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿತ್ತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಸಿಎಂ ಸಿದ‍್ಧರಾಮಯ್ಯ, ನಮ್ಮ ಸರ್ಕಾರ ಹೊಸ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದಿದ್ದಾರೆ.

ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ  ನೀಡಿದ್ದಾರೆ, ಆದರೆ ನಾವು ತೆರೆಯುವುದಿಲ್ಲ ಎಂದು ಹೇಳಿದರು.

ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ

ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಹಾಳು ಮಾಡಿದವರೇ ಬಿಜೆಪಿಯವರು. ಅವರಿಗೆ ಯಾವ ನೈತಿಕತೆ ಇದೆ. ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು  ಸಾಲ ಮಾಡಿರಲಿಲ್ಲ. ಹಾಗೂ ಈ ಮೊತ್ತದ ಬದ್ಧತೆ ವೆಚ್ಚ ಇರಲಿಲ್ಲ.  ಎಲ್ಲಾ ಹಾಳು ಮಾಡಿ ಈಗ ಹೇಳುತ್ತಾರೆ ಎಂದರು.

ಕಾಂಗ್ರೆಸ್  ಪಕ್ಷದ ಶಾಸಕರೇ ಈ ಆರೋಪ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹೆಚ್ಚುವರಿ ಅನುದಾನ ದೊರೆಯುತ್ತಿಲ್ಲ ಎಂದು ಹೇಳಿದ್ದಾರೆ. ನಿಯಮಿತ ಅನುದಾನ ದೊರೆಯುತ್ತಿದೆ. ಭದ್ರಾ ಯೋಜನೆಗೆ  200 ಕೋಟಿ ರೂ.ಗಳನ್ನು ಭೂ ಸ್ವಾಧೀನಕ್ಕೆ ನೀಡಲಾಗಿದೆ.  ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ ಹಾಗೂ ಗ್ಯಾರಂಟಿ ಯೋಜನೆಗಳಿಗೂ ಅನುದಾನದ ಕೊರತೆ ಇಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಪಡಿಸಿದರು.

ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ?

ಬಿಜೆಪಿ ಸತ್ಯ ಶೋಧನಾ ಸಮಿತಿ ಶಿವಮೊಗ್ಗಕ್ಕೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ,  ಸತ್ಯ ಶೋಧನೆ ಮಾಡಲು ಏನಾಗಿದೆ. ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್-ಮಿಲಾದ್ ಸಂದರ್ಭದಲ್ಲಿ ಮುಸ್ಲಿಮರು ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ, ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ ಕ್ರಮ ಜರುಗಿಸಲಾಗಿದೆ. ಅವರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಕಾನೂನು ಕೈಗೆತ್ತಿಕೊಳ್ಳಲು ಬಿಡಬೇಡಿ ಎಂದು ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.

Key words:  Our government –will- not open -new liquor shops- CM -Siddaramaiah