Sunday, October 25, 2026

Dasara Wishes

State DasraWishes_JK DasraWishes JK
Happy Dasara
Home Front Page ಏಷ್ಯನ್ ಗೇಮ್ಸ್’ನಲ್ಲಿ ಭಾರತದ ಅತ್ಯುತ್ತಮ ಸಾಧನೆ: ಪ್ರಧಾನಿ ಮೋದಿ ಮೆಚ್ಚುಗೆ

ಏಷ್ಯನ್ ಗೇಮ್ಸ್’ನಲ್ಲಿ ಭಾರತದ ಅತ್ಯುತ್ತಮ ಸಾಧನೆ: ಪ್ರಧಾನಿ ಮೋದಿ ಮೆಚ್ಚುಗೆ

ಬೆಂಗಳೂರು, ಅಕ್ಟೋಬರ್ 08, 2023 (www.justkannada.in): ಏಷ್ಯನ್ ಗೇಮ್ಸ್’ನಲ್ಲಿ ಭಾರತದ ಅತ್ಯುತ್ತಮ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಭಾರತದ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದು, ಇದು ದೇಶಕ್ಕೆ ಅತ್ಯಧಿಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ.

ನಮ್ಮ ಆಟಗಾರರ ಅಚಲ ದೃಢನಿಶ್ಚಯ, ಅವಿರತ ಮನೋಭಾವ ಮತ್ತು ಕಠಿಣ ಪರಿಶ್ರಮವು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಅವರ ಗೆಲುವುಗಳು ನಮಗೆ ನೆನಪಿಡುವ ಕ್ಷಣಗಳನ್ನು ನೀಡಿವೆ ಎಂದು ಮೋದಿ ಶ್ಲಾಘಿಸಿದ್ದಾರೆ.

ಕ್ರೀಡಾಪಟುಗಳು ಕಳೆದ 60 ವರ್ಷಗಳಿಗಿಂತ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 107 ಪದಕಗಳನ್ನು ಮನೆಗೆ ತಂದಿದ್ದಾರೆ. ಈ ಮೂಲಕ ನಮ್ಮೆಲ್ಲರಿಗೂ ಸ್ಫೂರ್ತಿ ನೀಡಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.