ಬೆಂಗಳೂರು,ಅಕ್ಟೋಬರ್ 12,2023(www.justkannada.in): ಬೆಂಗಳೂರಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 16ಕ್ಕೆ ಏರಿಕೆಯಾಗಿದೆ.
ಅಗ್ನಿ ಅವಘಡದಲ್ಲಿ ಗಾಯಗೊಂಡು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬುವವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ವೆಂಕಟೇಶ್ ಬೊಮ್ಮನಹಳ್ಳಿಯ ಗಾರೇಬಾವಿಪಾಳ್ಯದ ನಿವಾಸಿಯಾಗಿದ್ದು ಇಂದು ಬೆಳಿಗ್ಗೆ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಅಂದು ಅಗ್ನಿ ಅವಘಢ ಸಂಭವಿಸಿದ ದಿನ ಸ್ನೇಹಿತನ ಹುಟ್ಟುಹಬ್ಬಕ್ಕೆಂದು ಅತ್ತಿಬೆಲೆಯ ಬಾಲಾಜಿ ಟ್ರೇಡರ್ಸ್ಗೆ ಪಟಾಕಿ ಖರೀದಿಸಲು ಹೋಗಿದ್ದರು. ಅದೇ ವೇಳೆಯೇ ಅಗ್ನಿ ದುರಂತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ವೆಂಕಟೇಶ್ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಾಳು ವೆಂಕಟೇಶ್ ನನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಸಾವನ್ನಪ್ಪಿದ್ದಾರೆ.
Key words: Fireworks -fire incident-bangalore- death – rises 16






