Sunday, September 20, 2026

BDA Apartments

Home Front Page ಕಾಂಗ್ರೆಸ್ ಪಕ್ಷ ಬಲಾಢ್ಯವಾಗಿದೆ: ಸರ್ಕಾರ ಬೀಳುತ್ತೆ ಅನ್ನೋದು ಭ್ರಮೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.

ಕಾಂಗ್ರೆಸ್ ಪಕ್ಷ ಬಲಾಢ್ಯವಾಗಿದೆ: ಸರ್ಕಾರ ಬೀಳುತ್ತೆ ಅನ್ನೋದು ಭ್ರಮೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.

ಬೆಂಗಳೂರು,ಅಕ್ಟೋಬರ್,13,2023(www.justkannada.in):  ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎಂದು ಹೇಳುತ್ತಿರುವ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಮಾಜಿ ಸಿಎಂ ಹಾಗೂ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಸರ್ಕಾರ ಬೀಳುತ್ತೆ ಅನ್ನೋದು ಭ್ರಮೆ.  135 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಬಲಾಢ್ಯವಾಗಿದೆ ಬಿಜೆಪಿಯವರು , ಹೆಚ್.ಡಿ ಕುಮಾರಸ್ವಾಮಿ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಕಾಂಗ್ರೆಸ್ ಪಕ್ಷ ಬಲಾಢ್ಯವಾಗಿದೆ jagadish shettar-hubli jagadish shettar hubli

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್,  ಎರಡು ಪಕ್ಷಗಳಲ್ಲೂ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮೈತ್ರಿಗೆ ಸದಾನಂದಗೌಡರೇ ವಿರೋಧ ಮಾಡುತ್ತಿದ್ದಾರೆ.  ಮೈತ್ರಿಯಿಂದಾಗಿ ಭಿನ್ನಮತ ಶುರುವಾಗುದೆ.  1 ಸೀಟ್ ಬಂದವರ ಜತೆ 25 ಸೀಟ್ ಬಂದವರು  ಯಾಕೆ ಮೈತ್ರಿ ಮಾಡಿಕೊಂಡಿದ್ದಾರೆ.  ಬಿಜೆಪಿ ನಾಯಕರು ವರಿಷ್ಠರ ಜೊತೆ ಮಾತನಾಡಲು ಧೈರ್ಯವಿಲ್ಲ ಎಂದು ಟೀಕಿಸಿದರು.

Key words: Congress party – strong- government -Former CM- Jagdish Shettar