Sunday, October 11, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page CWRC ಆದೇಶ ಎತ್ತಿ ಹಿಡಿದ CWMA: ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ.

CWRC ಆದೇಶ ಎತ್ತಿ ಹಿಡಿದ CWMA: ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ.

ನವದೆಹಲಿ, ಅಕ್ಟೋಬರ್ 13,2023(www.justkannada.in): ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಪರಿಸ್ಥಿತಿ ಇದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ಧ ಆದೇಶವನ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ.

ಅಕ್ಟೋಬರ್ 16ರಿಂದ ಅಕ್ಟೋಬರ್ 31ರವರೆಗೆ 15 ದಿನಗಳ ಕಾಲ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರನ್ನ ತಮಿಳುನಾಡಿಗೆ ಬಿಡುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಕರ್ನಾಟಕಕ್ಕೆ ಆದೇಶಿಸಿತ್ತು.CWRC ಆದೇಶ ಎತ್ತಿ ಹಿಡಿದ CWMA: ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ krs

ಈ ಸಂಬಂಧ ಇಂದು ನಡೆದ ಮರುಪರಿಶೀಲನಾ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನ ಎತ್ತಿ ಹಿಡಿದಿದ್ದು ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

Key words: CWRC- order- upheld – CWMA- Karnataka -cavery water