Sunday, August 23, 2026

BDA Apartments

Home Front Page ಹೆಚ್.ಡಿಕೆ, ನಳಿನ್ ಕುಮಾರ್ ಕಟೀಲ್ ಏನು ನ್ಯಾಯಾಧೀಶರಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ.

ಹೆಚ್.ಡಿಕೆ, ನಳಿನ್ ಕುಮಾರ್ ಕಟೀಲ್ ಏನು ನ್ಯಾಯಾಧೀಶರಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ.

ಬೆಳಗಾವಿ, ಅಕ್ಟೋಬರ್,18,2023(www,justkannada.in): ಡಿ.ಕೆ ಶಿವಕುಮಾರ್ 2ನೇ ಬಾರಿಗೆ ತಿಹಾರ್ ಜೈಲಿಗೆ ಹೋಗಲು ರೆಡಿ ಆಗಬೇಕು ಎಂದು ಹೇಳಿಕೆ ನೀಡಿದ್ದ  ಬಿಜೆಪಿ ರಾಜ್ಯಾಧ್ಯಕ್ಷ   ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಹೆಚ್ ​ಡಿ ಕುಮಾರಸ್ವಾಮಿ  ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದರು.

ಬೆಳಗಾವಿಯಲ್ಲಿ ಮಾತನಾಡಿದ ಡಿಸಿಎಂ  ಡಿಕೆ ಶಿವಕುಮಾರ್​, ನಳಿನ್‌ ಕುಮಾರ್ ಕಟೀಲ್, ಹೆಚ್‌ಡಿ ಕುಮಾರಸ್ವಾಮಿ ಏನು ನ್ಯಾಯಾಧೀಶರಾ..? ಹೆಚ್​ಡಿ ಕುಮಾರಸ್ವಾಮಿಯೂ ಜಡ್ಜ್ ಅಲ್ಲ, ಕಟೀಲ್ ಸಹ ಅಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿ ನಾಯಕ ಸಿಟಿ ರವಿಗೆ ಲೂಟಿ ರವಿ ಎಂದು ಹೆಸರು ಕೊಟ್ಟಿದ್ದೇ ಅವರ ಪಕ್ಷದವರು. ಯಾರು ಯಾರು ಏನು ಮಾತನಾಡಿದ್ದಾರೆ ಎಂಬ ದಾಖಲೆ ನನ್ನ ಬಳಿ ಇವೆ. ಮುಂದೆ ಸಮಯ ಬರಲಿ, ಎಲ್ಲವನ್ನೂ ಹೇಳುತ್ತೇನೆ ಎಂದು ಡಿಕೆ ಶಿವಕುಮಾರ್  ತಿಳಿಸಿದರು.

ಮಹದಾಯಿ ಯೋಜನೆ ಜಾರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಮಹಾದಾಯಿ ಯೋಜನೆ ಜಾರಿ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ಈ ಎಲ್ಲ ಅಡೆತಡೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ನಿವಾರಿಸಬೇಕು. ಕಾವೇರಿ ನದಿ ನೀರು ವಿವಾದ ಸಂಬಂಧ ನಾವು ವ್ಯಸ್ತರಾಗಿದ್ದೆವು. ಮೇಕೆದಾಟು ಯೋಜನೆಯಂತೆ ಮಹದಾಯಿಯನ್ನೂ ಆದ್ಯತೆ ಮೇರೆಗೆ ಜಾರಿಗೊಳಿಸುತ್ತೇವೆ ಎಂದು ಹೇಳಿದರು.

Key words:  HDK- Nalin Kumar Kateel –not- judge – DCM- DK Shivakumar .