Sunday, August 23, 2026

BDA Apartments

Home Front Page ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 19, 2023 (www.justkannada.in): ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು, ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸನ್ಮಾನಿಸಿ ನಗದು ಪುರಸ್ಕಾರ ಪ್ರದಾನ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ, ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸದ್ಯ ಪೊಲೀಸ್ ಮತ್ತು ಅರಣ್ಯ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಎರಡರಷ್ಟು ಮೀಸಲಾತಿ ನೀಡುತ್ತಿದ್ದು, ಇತರೆ ಇಲಾಖೆಗಳಲ್ಲಿಯೂ ಶೇಕಡ ಎರಡರಷ್ಟು ಮೀಸಲಾತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಕಳೆದ ಬಾರಿ 70, ಈ ಬಾರಿ 107 ಪದಕಗಳನ್ನು ಏಷ್ಯನ್ ಗೇಮ್ಸ್ ನಲ್ಲಿ ಕ್ರೀಡಾಪಟುಗಳು ಗೆದ್ದಿದ್ದಾರೆ. ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡುತ್ತಿದೆ. ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ. ಸಾಧನೆ ಮಾಡಿದ ನಿಮಗೆ ಅಭಿನಂದನೆಗಳು ಎಂದು ಸಿಎಂ ಹೇಳಿದ್ದಾರೆ.