Sunday, August 23, 2026

BDA Apartments

Home Front Page ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ: ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ: ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ.

ಬೆಂಗಳೂರು,ಅಕ್ಟೋಬರ್,19,2023(www.justkannada.in):  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಬಂಡಾಯವೆದ್ದಿದ್ದ ಸಿಎಂ ಇಬ್ರಾಹಿಂಗೆ ಜೆಡಿಎಸ್ ನಾಯಕರು ಶಾಕ್ ನೀಡಿದ್ದು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂರನ್ನ ಉಚ್ಚಾಟನೆ ಮಾಡಲು ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ಮಾಡಲಾಗಿದೆ.

ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಇಬ್ರಾಹಿಂ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಒಮ್ಮತದ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂರನ್ನ ಉಚ್ಚಾಟಿಸಿ ಆಸ್ಥಾನಕ್ಕೆ ಮತ್ತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಸಭೆಯಲ್ಲಿ ಹೆಚ್.ಡಿ ದೇವೇಹಗೌಡರು, ಹೆಚ್.ಡಿ ಕುಮಾರಸ್ವಾಮಿ ಮತ್ತು ಶಾಸಕರು ಉಪಸ್ಥಿತರಿದ್ದರು.

Key words: CM Ibrahim-ouster – JDS -state president-post-Decision – core -committee -meeting.