Sunday, August 23, 2026

BDA Apartments

Home Front Page ಸರ್ಕಾರದ ಲೋಪಗಳ ವಿರುದ್ಧ ಜೆಡಿಎಸ್ ಸಮರ್ಥವಾಗಿ ಹೋರಾಡಲಿದೆ-ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ.

ಸರ್ಕಾರದ ಲೋಪಗಳ ವಿರುದ್ಧ ಜೆಡಿಎಸ್ ಸಮರ್ಥವಾಗಿ ಹೋರಾಡಲಿದೆ-ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು ಅಕ್ಟೋಬರ್,19,2023(www.justkannada.in): ಸರ್ಕಾರದ ಲೋಪಗಳ ವಿರುದ್ಧ ಜೆಡಿಎಸ್ ಸಮರ್ಥವಾಗಿ ಹೋರಾಡಲಿದೆ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ  ಸರ್ವಸದಸ್ಯರ ಸಲಹೆ ಆಧರಿಸಿ ರಾಜ್ಯಾಧ್ಯಕ್ಷ ಸ್ಥಾನ ನಿರ್ವಹಿಸುತ್ತೇನೆ. ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಆಘಾತಕ್ಕೊಳಗಿದ್ದೆವು. ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲು ನಿರ್ಧರಿಸಿದ್ದೇವೆ. ರಾಜ್ಯ ಸರ್ಕಾರದ ಲೋಪಗಳ ವಿರುದ್ಧ ಸದನದ ಒಳಗೆ, ಹೊರಗೆ ಜೆಡಿಎಸ್ ಸಮರ್ಥವಾಗಿ ಹೋರಾಡಲಿದ್ದೇವೆ ಎಂದರು.

ಇಂದು ನಡೆದ ಸಭೆಯಲ್ಲಿ ಜೆಡಿಎಸ್​ನ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು.18 ಶಾಸಕರ ಮತ್ತು ಪಕ್ಷದ ಪದಾಧಿಕಾರಿಗಳ ಅಭಿಪ್ರಾಯ ಪಡೆದಿದ್ದೇವೆ. ಪಕ್ಷ ಸಂಘಟನೆ ದೃಷ್ಟಿಯಿಂದ ದಸರಾ ನಂತರ ಹಲವಾರು ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಸಭೆಗೆ ಆಗಮಿಸಿ ಸಲಹೆ ನೀಡಿದರು. ಸರ್ವ ಸದಸ್ಯರ ಸಲಹೆ ಆಧರಿಸಿ ರಾಜ್ಯಾಧ್ಯಕ್ಷ ಸ್ಥಾನ ನಿರ್ವಹಿಸುವೆ ಎಂದು ತಿಳಿಸಿದರು.

Key words: JDS -fight -against – government- lapses – JDS state president- HD Kumaraswamy.