Wednesday, August 26, 2026

BDA Apartments

Home Front Page ಮೈಸೂರು ಮಹಾರಾಣಿ ಹಾಸ್ಟೆಲ್ ಆವರಣದಲ್ಲಿ 99 ಕೋಟಿ ರೂ. ವೆಚ್ಚದ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ: ಸಿಎಂ...

ಮೈಸೂರು ಮಹಾರಾಣಿ ಹಾಸ್ಟೆಲ್ ಆವರಣದಲ್ಲಿ 99 ಕೋಟಿ ರೂ. ವೆಚ್ಚದ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಅಕ್ಟೋಬರ್ 22, 2023 (www.justkannada.in): ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ನಂತರ ಮಾತನಾಡಿದ ಅವರು, ರಾಜ್ಯದಲ್ಲಿರುವ ಎಂಜಿನಿಯರಿಂಗ್ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡಬೇಕು. ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಗೆ ಸೂಚನೆ ನೀಡಿದರು.

ಮೈಸೂರು ಮಹಾರಾಣಿ ಆರ್ಟ್ಸ್ ಕಾಲೇಜು ಹಾಸ್ಟೆಲ್ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸಬೇಕು ಎಂದು ಸಿದ್ದರಾಮಯ್ಯ ನೀಡಿದರು.