Thursday, August 27, 2026

BDA Apartments

Home Front Page ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ ?

ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ ?

ಬೆಂಗಳೂರು, ಅಕ್ಟೋಬರ್ 23, 2023 (www.justkannada.in): ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಚಿಂತಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ಕೊನೆಗೂ ವರಿಷ್ಠರು ನಿರ್ಧರಿಸಿದ್ದಾರೆ. ಇಂದು ಇಲ್ಲ ನಾಳೆಯೊಳಗೆ ಘೋಷಣೆ ಸಾಧ್ಯತೆ ಇದೆ.

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಸಿ.ಟಿ. ರವಿ, ವಿ.ಸೋಮಣ್ಣ, ಅಶ್ವತ್ಥ್ ನಾರಾಯಣ್, ಬಸವನಗೌಡ ಪಾಟೀಲ್ ಯತ್ನಾಳ್, ಬಿ.ವೈ. ವಿಜಯೇಂದ್ರ, ಸುನಿಲ್ ಕುಮಾರ್ ರೇಸ್’ನಲ್ಲಿದ್ದಾರೆ ಎನ್ನಲಾಗಿದೆ.