Sunday, September 20, 2026

BDA Apartments

ಮೈಸೂರು ದಸರಾ: ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ BDA JK_Adv BDA Adv
Home Front Page ಮೈಸೂರು ದಸರಾ: ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ.

ಮೈಸೂರು ದಸರಾ: ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ.

ಮೈಸೂರು,ಅಕ್ಟೋಬರ್,24,2023(www.justkannada.in): ವಿಶ್ವ ವಿಖ್ಯಾತ  ಮೈಸೂರು ದಸರಾದ ಕೇಂದ್ರ ಬಿಂದು, ಪ್ರಮುಖ ಆಕರ್ಷಣೆ  ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.

ಇಂದು ವಿಜಯದಶಮಿಯಂದು ಜಂಬೂಸವಾರಿ ನಡೆಯಲಿದ್ದು , ಕ್ಯಾಪ್ಟನ್ ಅಭಿಮನ್ಯು 750 ಕೆಜಿ ಚಿನ್ನದ ಅಂಬಾರಿ ಜೊತ್ತು ರಾಜಪಥದಲ್ಲಿ ಸಾಗಲಿದ್ದಾರೆ,  ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 1.46ರಿಂದ 2.08ರೊಳಗೆ ನಂದಿಧ್ವಜಕ್ಕೆ ಸಿಎಂ ಸಿದ್ಧರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಸಂಜೆ 4.40ರಿಂದ 5 ಗಂಟೆ ನಡುವೆ ಸಲ್ಲುವ ಶುಭ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.        ಮೈಸೂರು ದಸರಾ mysore-dasara mysore dasara

ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ಮಹಿಷಾಸುರ ಮರ್ಧಿನಿ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಇನ್ನು ವಿಶ್ವವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಹೆಜ್ಜೆಹಾಕಿದರೇ ಇತರೇ ಆನೆಗಳು ಸಾಥ್ ನೀಡಲಿವೆ

ಈ ಬಾರಿ 14 ಆನೆಗಳು ಹಾಗೂ 47 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಲಿವೆ. ಈ ಅಮೋಘ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನ ಕಾತುರದಿಂದ ಕಾಯುತ್ತಿದ್ದಾರೆ.

Key words: Mysore Dasara- historic –Jambusavari-today