Wednesday, July 29, 2026

BDA Apartments

Home Front Page ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ನಿವಾಸದಲ್ಲಿ ಅರಣ್ಯಾಧಿಕಾರಿಗಳಿಂದ ಶೋಧ: ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ.

ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ನಿವಾಸದಲ್ಲಿ ಅರಣ್ಯಾಧಿಕಾರಿಗಳಿಂದ ಶೋಧ: ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ.

ವಿಜಯಪುರ, ಅಕ್ಟೋಬರ್​​​​ 26,2023(www.justkannada.in):  ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನ ಬಳಿಕ ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು ನಟರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ಮಧ್ಯೆ ಇದೀಗಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ  ಎನ್ನಲಾಗಿದೆ.

ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಪುತ್ರ ಹುಲಿ ಉಗುರು ಧರಿಸಿದ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಕೆಲ ಫೋಟೋಗಳು ವೈರಲ್​​​ ಆಗಿದ್ದವು. ಬಳಿಕ ಅವರು ಅದು ನಕಲಿ ಹುಲಿ ಉಗುರು, ಬೇಕಾದರೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಮಾಡಲಿ ಎಂದಿದ್ದರು.

ಇದರ ಬೆನ್ನಲ್ಲೇ ಇಂದು ನಗರದಲ್ಲಿರುವ ವಿಜುಗೌಡ ಪಾಟೀಲ್ ಮನೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ ಮಾಡಿದ್ದು, ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜುಗೌಡ ಪುತ್ರ ಶಾಶ್ವತಗೌಡ ಪಾಟೀಲ್ ಹಾಕಿರುವ ಹುಲಿ ಉಗುರು ಕುರಿತು ಅರಣ್ಯಾಧಿಕಾರಿಗಳು ಪರಿಶೀಲಿಸಿದ್ದಾರೆ.

ನಟ ದರ್ಶನ್, ಜಗ್ಗೇಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆ ಮೇಲೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ದಾಳೀ ನಡೆಸಿ ಪರಿಶೀಲಿಸಿದ್ದರು.

Key words: Forest officials -search -BJP leader -Vijugowda Patil-residence-Tiger nail – seized.