ಬೆಂಗಳೂರು,ನವೆಂಬರ್,8,2023(www.justkannada.in): ರೋಹಿಂಗ್ಯಾಗಳಿಂದ ಉಗ್ರ ಚಟುವಟಿಕೆ ಆರೋಪ ಹಿನ್ನೆಲೆ ಬೆಳ್ಳಂಬೆಳಿಗ್ಗೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಎನ್ ಐಎ ದಾಳಿ ನಡೆಸಿ8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದಿದೆ.![]()
ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ 15 ಎನ್ ಐಎ ತಂಡಗಳು ಏಕಕಾಲಕ್ಕೆ ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ.
8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Key words: NIA -raid –Bengaluru- 8 illegal Bangladeshi- immigrants -arrested







