Sunday, October 11, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ : ಮಾಜಿ ಸಿಎಂ ಬಿಎಸ್ ವೈ ಪ್ರತಿಕ್ರಿಯೆ ಏನು..?

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ : ಮಾಜಿ ಸಿಎಂ ಬಿಎಸ್ ವೈ ಪ್ರತಿಕ್ರಿಯೆ ಏನು..?

ಬೆಂಗಳೂರು,ನವೆಂಬರ್,11,2023(www.justkannada.in): ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ  ನೇಮಕವನ್ನ ನಿರೀಕ್ಷೆ ಮಾಡಿರಲಿಲ್ಲ.  ವರಿಷ್ಠರು ಒಳ್ಳೆಯ ನಿರ್ಧಾರ ಮಾಡಿದ್ದಾರೆ  ಎಂದು ಹೇಳಿದರು.

ಈ ಕುರಿತು ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಹೈಕಮಾಂಡ್  ಮುಂದೆ ನಾನು ಬೇಡಿಕೆ ಇಟ್ಟಿರಲಿಲ್ಲ. ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ. ದೊಡ್ಡ ಸ್ಥಾನ ಸಿಕ್ಕಿದಾಗ  ಸವಾಲುಗಳು ಎದುರಾಗುತ್ತದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.  ಲೋಕಸಭೆ ಚುನಾವಣೆಗೆ ಗೆಲ್ಲಬೇಕು. ರಾಜ್ಯಾದ್ಯಂತ ನಾನು ಪ್ರವಾಸ ಮಾಡುತ್ತೇನೆ ಎಂದರು.

ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಗುರಿ ಇಟ್ಟಿದ್ದೇವೆ. ಮೋದಿ ಮತ್ತೆ ಪ್ರಧಾನಿಯಾಗಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಎಸ್ ವೈ ತಿಳಿಸಿದರು.

Key words: BY Vijayendra -appointed – BJP- state president-reaction – former CM- BS yeddyurappa