Sunday, August 23, 2026

BDA Apartments

Home Front Page ಮಿಜೋರಾಂ ವಿಧಾನಸಭೆ ಚುನಾವಣೆ: ಕಾಂಗ್ರೆಸ್’ಗೆ ಆರಂಭಿಕ ಮುನ್ನಡೆ

ಮಿಜೋರಾಂ ವಿಧಾನಸಭೆ ಚುನಾವಣೆ: ಕಾಂಗ್ರೆಸ್’ಗೆ ಆರಂಭಿಕ ಮುನ್ನಡೆ

ಬೆಂಗಳೂರು, ಡಿಸೆಂಬರ್ 04, 2023 (www.justkannada.in): ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಜೆಡ್‌ಪಿಎಂ 7, ಎಂಎನ್‌ಎಫ್ 5, 4ರಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. 40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಯಲ್ಲಿ 21 ಸ್ಥಾನ ಪಡೆದವರು ಅಧಿಕಾರದ ಗದ್ದುಗೆ ಏರುತ್ತಾರೆ.

ರಾಜ್ಯದಲ್ಲಿ 8.57 ಲಕ್ಷ ಮತದಾರರಿದ್ದು, ಶೇಕಡ 80ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. 18 ಮಹಿಳೆಯರು ಸೇರಿದಂತೆ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಎಂಎನ್‌ಎಫ್‌, ಜೆಡ್‌ಪಿಎಂ ಮತ್ತು ಕಾಂಗ್ರೆಸ್ 40 ಸ್ಥಾನಗಳಲ್ಲೂ ಸ್ಪರ್ಧಿಸಿದ್ದರೆ, ಬಿಜೆಪಿ 13 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ನಾಲ್ಕು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.