Sunday, October 4, 2026

BDA Apartments

Home Front Page ವಿಪಕ್ಷಗಳ ಪ್ರಶ್ನೆಗೆ ಉತ್ತರ ಕೊಡಲು ಸಿದ್ಧ- ಸಿಎಂ ಸಿದ್ದರಾಮಯ್ಯ.

ವಿಪಕ್ಷಗಳ ಪ್ರಶ್ನೆಗೆ ಉತ್ತರ ಕೊಡಲು ಸಿದ್ಧ- ಸಿಎಂ ಸಿದ್ದರಾಮಯ್ಯ.

ಬೆಳಗಾವಿ,ಡಿಸೆಂಬರ್,4,2023(www.justkannada.in):  ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ  ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಈ ಮಧ್ಯೆ ವಿಪಕ್ಷಗಳು ಕೇಳುವ ಪ್ರಶ್ನೆಗೆ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಲಾಪಕ್ಕೆ ಭಾಗಿಯಾಗುವ ಮುನ್ನ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇವತ್ತಿನಿಂದ ಅಧಿವೇಶನ ಆರಂಭವಾಗುತ್ತಿದೆ. ಕೆಲವು ಬಿಲ್ ಗಳಿದಾವೆ, ವಿಪಕ್ಷಗಳ ಪ್ರಶ್ನೆಗೆ ಉತ್ತರ ಕೊಡಲು ನಾವು ಸಿದ್ದರಿದ್ದೇವೆ. ಹೆಚ್ಚಾಗಿ ಉತ್ತರ ಕರ್ನಾಟಕದ ಕಡೆ ಹೆಚ್ಚು ಸಮಸ್ಯೆಗಳಿವೆ. ಅದರ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕಾಗಿದೆ ಎಂದರು.ವಿಪಕ್ಷಗಳ ಪ್ರಶ್ನೆಗೆ ಉತ್ತರ ಕೊಡಲು ಸಿದ್ಧ- ಸಿಎಂ ಸಿದ್ದರಾಮಯ್ಯ siddaramaiah

ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿಗಳ ಕೆಲಸ ಮಾಡಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಕೆಲಸ ಮಾಡದೇ ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತಾ.? ಮಧ್ಯ ಪ್ರದೇಶದಲ್ಲಿ ಬಿಜೆಪಿ ಅವರು ಗ್ಯಾರಂಟಿ ಘೋಷಣೆ ಮಾಡಿರಲಿಲ್ವಾ.? ನಾವು ಚುನಾವಣೆಯಲ್ಲಿ ಗೆಲ್ಲಲೇ ಬೇಕು ಅಂತಲ್ಲ ಎಲ್ಲಾ ವರ್ಗದ  ಬಡ ಜನರಿಗೆ ಶಕ್ತಿ ತುಂಬಲು ಈ ಕಾರ್ಯಕ್ರಮಗಳನ್ನು ಕೊಟ್ಟಿದ್ದೀವಿ ಇವೆಲ್ಲ ಬಡವರ ಕಾರ್ಯಕ್ರಮಗಳು. ಅದಕ್ಕೆ ಗ್ಯಾರಂಟಿ ಅಂತ ಹೆಸರಿಟ್ಟಿದ್ದೇವೆ. ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತಾಡಲಿಕ್ಕೆ ನೈತಿಕತೆಯ ಇಲ್ಲ  ಎಂದು ಟಾಂಗ್ ಕೊಟ್ಟರು.

Key words: CM Siddaramaiah – ready – answer – opposition parties- questions.