Sunday, August 23, 2026

BDA Apartments

Home Front Page ಬ್ರ್ಯಾಂಡ್ ಬೆಂಗಳೂರು ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ- ಸಿಎಂ ಸಿದ್ದರಾಮಯ್ಯ ಚಾಟಿ.

ಬ್ರ್ಯಾಂಡ್ ಬೆಂಗಳೂರು ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ- ಸಿಎಂ ಸಿದ್ದರಾಮಯ್ಯ ಚಾಟಿ.

ಬೆಳಗಾವಿ,ಡಿಸೆಂಬರ್,6,2023(www.justkannada.in): ಬ್ರ್ಯಾಂಡ್ ಬೆಂಗಳೂರು ಕುರಿತು ಸರ್ಕಾರವನ್ನ ಟೀಕಿಸಿದ  ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಚಾಟಿ ಬೀಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಕಾಲದಲ್ಲಿ ಗುಂಡಿ ಮುಚ್ಚುವುದಕ್ಕೆ ಹೈಕೋರ್ಟ್‌ ಛೀಮಾರಿ ಹಾಕಿತ್ತು. ಬಿಜೆಪಿ ಅವರು ಬೆಂಗಳೂರಿಗೆ ಏನು ಮಾಡಿದ್ದಾರೆ? ಗುಂಡಿ ಮುಚ್ಚಲಿಕ್ಕೆ ಆಗಿಲ್ಲ ಅವರಿಗೆ ಎಂದು ಉಗಿದಿತ್ತು. ಹೀಗಾಗಿ ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಮಾತಾಡುವ ನೈತಿಕತೆ ಬಿಜೆಪಿ ಅವರಿಗಿಲ್ಲ ಎಂದು ಕಿಡಿಕಾರಿದರು.

ಮುಸ್ಲೀಮರ ಒಲೈಕೆ ಭಾಷಣ ಎಂದು ಟೀಕಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಹರಿಹಾಯ್ದ ಸಿಎಂ ಸಿದ್ದರಾಮಯ್ಯ,  ನಾನು ಎಲ್ಲ ಸಮುದಾಯಕ್ಕೆ ಕೊಡುತ್ತೇನೆ ಎಂದು ಹೇಳಿದ್ದೆ. ಕುಮಾರಸ್ವಾಮಿ ಹೇಳಿದ್ದಕ್ಕೆ ನಾನು ಉತ್ತರ ಕೊಡುತ್ತೇನೆ ಎಂದರು.

Key words: BJP- does not – morals -talk – brand Bangalore- CM Siddaramaiah