Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ಬೆಳಗಾವಿ,ಡಿಸೆಂಬರ್ ,6,2023(www.justkannada.in):  ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕೆಲ ಬಿಜೆಪಿ ಶಾಸಕರು ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ ಎನ್ನಲಾಗಿದ್ದು, ಈ ಕುರುತು ಪ್ರತಿಕ್ರಿಯಿಸಿರುವ  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಆದ್ರೆ, ಉಚಿತ ಮಾತ್ರ ಅಲ್ಲ, ಹಣ ಕೊಟ್ಟು ಟಿಕೆಟ್ ಪಡೆದು ಹೋಗಬೇಕು ಎಂದಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನಾನಾಗಿಯೇ ದೆಹಲಿಗೆ ಹೋಗಲ್ಲ, ಕರೆ ಬಂದ ಮೇಲೆ ಹೋಗುತ್ತೇನೆ. ಯಾವಾಗ ಕರೆ ಬರುತ್ತದೆಯೋ ಆಗ ದೆಹಲಿಗೆ ಹೋಗುತ್ತೇನೆ. ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯ ಒಬ್ಬರು, ಕರ್ನಾಟಕ ಒಬ್ಬರು ಇದ್ದಾರೆ ಎಂದು  ವಾಗ್ದಾಳಿ ನಡೆಸಿದರು.ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ b...

ಅರವಿಂದ್ ಬೆಲ್ಲದ್ ವಿಪಕ್ಷ ಉಪನಾಯಕನಾಗಿ ಆಯ್ಕೆ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್, ವಿಧಾನಸಭೆ ವಿಪಕ್ಷ ಉಪನಾಯಕನಿಗೆ ಯಾವ ಪವರ್ ಇರಲ್ಲ. ಏನೋ ಕೊಡಬೇಕೆಂದು ಕೊಡುತ್ತಿರಬೇಕು ಅಷ್ಟೇ. ಎಲ್ಲಾ ತೀರ್ಮಾನ ವಿಪಕ್ಷ ನಾಯಕ, ಅಧ್ಯಕ್ಷರು ತೆಗೆದುಕೊಳ್ಳುತ್ತಾರೆ. ಉಪನಾಯಕ ಅಂದ್ರೆ ವಿಪಕ್ಷ ನಾಯಕನ ಬಳಿ ಕೂರಬೇಕು ಅಷ್ಟೇ. ಈಗ ಡೆಪ್ಯೂಟಿ ಸ್ಪೀಕರ್ ಇಲ್ವಾ ಅದೇ ರೀತಿ ಕೂರಬೇಕು ಅಷ್ಟೇ ಎಂದು ಲೇವಡಿ ಮಾಡಿದರು.

Key words: Going – Delhi – certain – BJP MLA -Basanagowda Patil Yatnal.