Wednesday, September 30, 2026

BDA Apartments

Home Crime ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವಕೀಲನ ಬರ್ಬರ ಹತ್ಯೆ.

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವಕೀಲನ ಬರ್ಬರ ಹತ್ಯೆ.

ಕಲಬುರಗಿ,ಡಿಸೆಂಬರ್,7,2023(www.justkannada.in): ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ  ತಲೆ ಮೇಲೆ ಕಲ್ಲು ಎತ್ತಿ ಹಾಕಿ ವಕೀಲರೊಬ್ಬರನ್ನ ಹತ್ಯೆ ಮಾಡಿರುವ  ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.

ನಗರದ ಸಾಯಿ ಮಂದಿರ ಬಳಿಯಿರುವ ಗಂಗಾ ಅಪಾರ್ಟ್ಮೆಂಟ್ ಬಳಿ ಈ ಘಟನೆ ನಡೆದಿದೆ. ಈರಣ್ಣಗೌಡ ಪಾಟೀಲ್ (40) ಹತ್ಯೆಯಾದ ವಕೀಲ.  ಇಬ್ಬರು ದುಷ್ಕರ್ಮಿಗಳು ಕೈಯಲ್ಲಿ ಮಚ್ಚು ಹಿಡಿದು  ವಕೀಲ ಈರಣ್ಣಗೌಡ ಪಾಟೀಲ್ ಅವರನ್ನ ಅಟ್ಟಾಡಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವಕೀಲನ ಬರ್ಬರ ಹತ್ಯೆ lawyer (1) lawyer 1

ಜಮೀನು ವಿವಾದ ಸಂಬಂಧಿಸಿದಂತೆ ಸಂಬಧಿಕರಿಂದಲೇ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿವಿ ಠಾಣೆ ಪೊಲೀಸರು  ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ.

Key words: killing – lawyer -kalburgi