Sunday, August 23, 2026

BDA Apartments

Home Front Page ಪ್ರಧಾನಿ ಮೋದಿ ಓಡಾಡೋದು ಐಷಾರಾಮಿ ವಿಮಾನದಲ್ಲೇ ಅಲ್ಲವೇ..? ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು.

ಪ್ರಧಾನಿ ಮೋದಿ ಓಡಾಡೋದು ಐಷಾರಾಮಿ ವಿಮಾನದಲ್ಲೇ ಅಲ್ಲವೇ..? ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು.

ಮೈಸೂರು, ಡಿಸೆಂಬರ್ 22,2023(www.justkannada.in):   ಸಚಿವ ಜಮೀರ್ ಅಹ್ಮದ್ ಖಾನ್ ಜತೆ ತಾವು ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ್ದನ್ನು  ಟೀಕಿಸಿದ ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಪ್ರಧಾನಿ ನರೇಂದ್ರ ಮೋದಿ ಯಾವ ವಿಮಾನದಲ್ಲಿ ಓಡಾಡುತ್ತಾರೆ? ಅವರು ಓಡಾಡೋದು ಐಷಾರಾಮಿ ವಿಮಾನದ ಅಲ್ಲವೇ ಎಂದು ಟಾಂಗ್ ನೀಡಿದರು.

ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂಥದ್ದು? ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಸಿಎಂ  ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ.

ಸಂಸತ್ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳ 146 ಸಂಸದರನ್ನ ಅಮಾನತುಗೊಳಿಸಿದ  ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ,ಇದು ಪ್ರಜಾಪ್ರಭುತ್ವದ ಕಗ್ಗೊಲೆ, ಸರ್ವಾಧಿಕಾರದ ಪರಮಾವಧಿ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಆಶಯಗಳ ಮೇಲೆ ನಂಬಿಕೆ ಇಲ್ಲ ವಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳಲ್ಲ ಅಂದರೆ ಅರ್ಥ ಏನು? ಬಿಜೆಪಿ ಪ್ರಜಾಪ್ರಭುತ್ವವೇ ಇಲ್ಲ ಎಂಬ ವಾತಾವರಣ ಸೃಷ್ಟಿಸುತ್ತಿದೆ. ಮುಂಬರುವ ಚುನಾವಣೆಯಲ್ಲೂ ಜನ ಇವರಿಗೆ ಪಾಠ ಕಲಿಸಲಿದ್ದಾರೆ ಎಂದು ಹರಿಹಾಯ್ದರು.

Key words: PM-Modi – luxury plane-CM- Siddaramaiah – BJP.