Friday, July 31, 2026

BDA Apartments

Home Front Page ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ: ಕಡ್ಡಾಯವಾಗಿ ಸೂಚನೆಗಳನ್ನು ಪಾಲಿಸುವಂತೆ ರಾಮಮಂದಿರ ಟ್ರಸ್ಟ್ ಕೋರಿಕೆ

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ: ಕಡ್ಡಾಯವಾಗಿ ಸೂಚನೆಗಳನ್ನು ಪಾಲಿಸುವಂತೆ ರಾಮಮಂದಿರ ಟ್ರಸ್ಟ್ ಕೋರಿಕೆ

ಬೆಂಗಳೂರು, ಡಿಸೆಂಬರ್ 24, 2023 (www.justkannada.in):  ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವುದಾದರೆ ಕೆಲ ಸೂಚನೆಗಳನ್ನು ಪಾಲಿಸುವಂತೆ ರಾಮಮಂದಿರ ಟ್ರಸ್ಟ್ ಕೋರಿದೆ.

ಜನವರಿ 22ರಂದು ನಡೆಯುವ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ಹಂಚಿಕೆ ಕಾರ್ಯ ಮುಂದುವರಿದಿದೆ.

ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಕಾರ್ಯಕ್ರಮಕ್ಕೆ ಆಗಮಿಸುವ ಸಾಧು ಸಂತರಿಗೆ, ಗಣ್ಯರಿಗೆ ವಿಶೇಷ ಮನವಿ ಮಾಡಿದ್ದಾರೆ.

ಬಿಗಿ ಬಂದೋಬಸ್ತ್ನಲ್ಲಿ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ರಾಮಮಂದಿರ ಟ್ರಸ್ಟ್ ನೀಡಿರುವ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.