Sunday, September 20, 2026

BDA Apartments

ವೈದ್ಯಕೀಯ ಸೀಟುಗಳ ಸಂಖ್ಯೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ತೀರ್ಮಾನ: ಕೇಂದ್ರ ಸ...
Home Front Page ವೈದ್ಯಕೀಯ ಸೀಟುಗಳ ಸಂಖ್ಯೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ತೀರ್ಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವೈದ್ಯಕೀಯ ಸೀಟುಗಳ ಸಂಖ್ಯೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ತೀರ್ಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು, ಡಿಸೆಂಬರ್ 24, 2023 (www.justkannada.in): ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ದೇಶದಲ್ಲಿನ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಜೋಶಿ ಹೇಳಿದ್ದಾರೆ.

ಬಡವರ ಮಕ್ಕಳು ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಬೇಕೆನ್ನುವುದು ಸರ್ಕಾರದ ಆಶಯವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ದೇಶದಲ್ಲಿ 1.1 ಲಕ್ಷದಷ್ಟು ಇರುವ ವೈದ್ಯಕೀಯ ಸೀಟುಗಳನ್ನು 2029ರ ವೇಳೆಗೆ 1.50 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.