ವಿಜಯಪುರ,ಜನವರಿ,10,2024(www.justkannada.in):ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಈ ಘಟನೆ ನಡೆದಿದೆ. ಸಿಂದಗಿಯಿಂದ ಮೋರಟಗಿಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಎದುರಿನಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದ್ದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ, ಬಸ್ ಗೆ ಬೆಂಕಿ ತಗುಲಿದ್ದು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿ ಹೊತ್ತಿಕೊಂಡ ಬೆನ್ನಲ್ಲೆ ಪ್ರಯಾಣಿಕರು ಬಸ್ ನಿಂದ ಇಳಿದಿದ್ದು ಅಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬಸ್ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು, ಸಿಂದಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Bike –bus-accident- rider -dies






