Saturday, August 15, 2026

BDA Apartments

Home Front Page ಹೆಚ್ಚುವರಿ ಡಿಸಿಎಂ ಹುದ್ದೆ ಬೇಡಿಕೆ ಇಟ್ಟವರು ಎರೆಡೆರೆಡು ಕ್ಷೇತ್ರ ಗೆಲ್ಲಿಸಿಕೊಡಲಿ-ಶಾಸಕ ಹೆಚ್.ಸಿ ಬಾಲಕೃಷ್ಣ ಟಾಂಗ್.

ಹೆಚ್ಚುವರಿ ಡಿಸಿಎಂ ಹುದ್ದೆ ಬೇಡಿಕೆ ಇಟ್ಟವರು ಎರೆಡೆರೆಡು ಕ್ಷೇತ್ರ ಗೆಲ್ಲಿಸಿಕೊಡಲಿ-ಶಾಸಕ ಹೆಚ್.ಸಿ ಬಾಲಕೃಷ್ಣ ಟಾಂಗ್.

ರಾಮನಗರ, ಜನವರಿ 13,2024(www.justkannada.in): ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಬೇಡಿಕೆ ಇಟ್ಟವರು ಎರೆಡೆರೆಡು ಲೋಕಸಭಾ ಕ್ಷೇತ್ರ  ಗೆಲ್ಲಿಸಿಕೊಡಲಿ ಎಂದು ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಟಾಂಗ್ ನೀಡಿದರು.

ಈ ಕುರಿತು ಮಾತನಾಡಿದ ಬಾಲಕೃಷ್ಣ,  ಹೆಚ್ಚುವರಿ ಡಿಸಿಎಂ ಹುದ್ದೆ ಹೇಳಿಕೆ ನೀಡುತ್ತಿರುವವರಿಗೆ ಲೋಕಸಭಾ ಚುನಾವಣೆ ಟಾಸ್ಕ್ ನೀಡಬೇಕು. ಹೆಚ್ಚುವರಿ ಡಿಸಿಎಂ ಬೇಡಿಕೆ ಇಟ್ಟವರು ಎರಡೆರಡು ಕ್ಷೇತ್ರ ಗೆಲ್ಲಿಸಿಕೊಡಲಿ. ಎರಡೆರಡು ಕ್ಷೇತ್ರ ಗೆಲ್ಲಿಸಿ ಕೊಡುವವರನ್ನು ಡಿಸಿಎಂ ಮಾಡೋಣ. ಜಾತಿ ಹೆಸರಿನಲ್ಲಿ ಡಿಸಿಎಂ ಮಾಡಿ ಅನ್ನೋದು ಸರಿಯಲ್ಲ. ಆದರೆ ಕೆಲ ಸಚಿವರು ಅನವಶ್ಯಕವಾಗಿ ಹೇಳಿಕೆ ನೀಡುತ್ತಿದ್ದಾರೆ. ಬೇಕಿದ್ದರೆ ಹೈಕಮಾಂಡ್​ ಭೇಟಿಯಾಗಿ ಮನವಿ ಮಾಡಿಕೊಳ್ಳಲಿ ಎಂದು ತಿಳಿಸಿದರು.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಕುರಿತು ಪ್ರತಿಕ್ರಿಯಿಸಿದ ಹೆಚ್.ಸಿ ಬಾಲಕೃಷ್ಣ, ರಾಮಮಂದಿರ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆದರೂ ರಾಜಕೀಯ ಉದ್ದೇಶದಿಂದ ಉದ್ಘಾಟನೆ ಮಾಡುತ್ತಿದ್ದಾರೆ. ಇಂತಹ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಅವರು (ಬಿಜೆಪಿ) ಮನೆಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ನಾವು ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ಕೊಡುತ್ತಿದ್ದೇವೆ. ಯಾರಿಗೆ ಮತ ಹಾಕಬೇಕೆಂದು ಜನ ತೀರ್ಮಾನಿಸುತ್ತಾರೆ. ಮಂತ್ರಾಕ್ಷತೆ ಕೊಟ್ಟವರಿಗಾ ಅಥವಾ ಎರಡು ಸಾವಿರ ರೂ. ಕೊಟ್ಟವರಿಗಾ? ಎಂಬುವುದನ್ನು ಜನ ನಿರ್ಧರಿಸುತ್ತಾರೆ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ ತಿಳಿಸಿದರು.

Key words: demanded- post – additional- DCM –MLA- HC Balakrishna