Sunday, October 18, 2026

Dasara Wishes

Happy Dasara
Home Front Page ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್ ಅಂಬಾಸಿಡರ್-ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ.

ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್ ಅಂಬಾಸಿಡರ್-ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ.

ಬೆಂಗಳೂರು, ಜನವರಿ,17,2024(www.justkannada.in):  ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ ಎಂದು ಬರೆದು ಪ್ರಧಾನಿ ಮೋದಿ ನಿದ್ದೆ ಮಾಡುವ ರೀತಿ ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್ ಕುರಿತು ಕಿಡಿಕಾರಿರುವ  ವಿಪಕ್ಷ ನಾಯಕ ಆರ್.ಅಶೋಕ್,  ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್ ಅಂಬಾಸಿಡರ್. ಜನ ನಿಮ್ಮನ್ನು ಮುಂದೆ ನಿದ್ರೆಗೆ ಬ್ರ್ಯಾಂಡ್ ಮಾಡುತ್ತಾರೆ ನೋಡಿ ಎಂದು ಟಾಂಗ್ ನೀಡಿದರು.

ಹಾಗೆಯೇ ಪ್ರಧಾನಿ ಮೋದಿ ದಿನದ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಸಿದ್ದರಾಮಯ್ಯ ಕೇವಲ 5 ಗಂಟೆಯೂ ಕೆಲಸ ಮಾಡಲ್ಲ.  ಕಾರ್ಯಕ್ರಮಗಳಲ್ಲಿ ಪ್ರಧಾನಿ ನಿದ್ದೆ ಮಾಡ್ತಿರುವ ಒಂದು ದಾಖಲೆ ಕೊಡಿ. ಸಿದ್ದರಾಮಯ್ಯ ಮಲಗಿರೋದಕ್ಕೆ ಸಾಕ್ಷಿ ಇದೆ.  ನಿಮ್ಮಿಂದ ಅಭಿವೃದ್ಧಿ ಸಾಧ್ಯವಿಲ್ಲ.  ನಿದ್ದೆರಾಮಯ್ಯ ಅಂತಾ ನಿಮಗೆ ಹೆಸರಿದೆಯೋ ಅಥವಾ ಮೋದಿಗೋ? ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್ ಅಂಬಾಸಿಡರ್ ಎಂದು ಹರಿಹಾಯ್ದರು.

ಪ‍್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ. ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ. ಎದ್ದೇಳಿ, ಪ್ರಧಾನಮಂತ್ರಿಯವರೇ! ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು ಎಂದು ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನಿದ್ರಿಸುವಂತೆ ಫೋಟೋಗಳನ್ನು ಟ್ವೀಟ್ ಮಾಡಿದ್ದರು. ಕರ್ನಾಟಕದ ವಿಚಾರದಲ್ಲಿ ಪಿಎಂ ನಿದ್ದೆ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದರು.

Key words: CM-siddaramaiah-brand ambassador- sleeping- opposition leader -R.Ashok