Tuesday, August 4, 2026

BDA Apartments

Home Front Page ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷ ಮುಂದುವರೆಯಬೇಕೆಂಬುದು ಜನರ ಆಶಯ- ಸಚಿವ ಕೆ.ಎನ್ ರಾಜಣ್ಣ.

ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷ ಮುಂದುವರೆಯಬೇಕೆಂಬುದು ಜನರ ಆಶಯ- ಸಚಿವ ಕೆ.ಎನ್ ರಾಜಣ್ಣ.

ತುಮಕೂರು,ಜನವರಿ,19,2024(www.justkannada.in):  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರೆಯಲು ಅಡೆತಡೆ ಇರುವುದಿಲ್ಲ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ,  ಸಿದ್ದರಾಮಯ್ಯ 5 ವರ್ಷ ಮುಂದುವರಿಯಬೇಕೆಂಬುದು ಜನರ ಆಶಯ. ಅದ್ದರಿಂದ ಯತೀಂದ್ರ ಅವರ ಹೇಳಿಕೆ ತಪ್ಪಲ್ಲ. ನಾನು ಸದಾಕಾಲ ಸಿದ್ದರಾಮಯ್ಯ ಪರವಾಗಿಯೇ ಮಾತನಾಡುತ್ತೇನೆ. ಅದರಲ್ಲಿ ಯಾವುದೇ ಹಿಂಜರಿಕೆ ಇಲ್ಲ. ಸಿದ್ದರಾಮಯ್ಯ ಅವರ ಅಧಿಕಾರವನ್ನು ಮುಂದುವರೆಸುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್  ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎನ್ ರಾಜಣ್ಣ, ಮುದ್ದಹನುಮೇಗೌಡ  ಅವರು ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ. ಈ ವಿಚಾರ ಚರ್ಚೆಯೂ ಆಗಿದೆ. ಆದರೆ ಟಿಕೆಟ್ ನೀಡುವ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಹೈಕಮಾಂಡ್ ಈ  ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

Key words: people- wish – Siddaramaiah – continue –as- CM -5 years – Minister- KN Rajanna