Thursday, September 10, 2026

BDA Apartments

Home Front Page ಹಿರೇಮಗಳೂರು ಕಣ್ಣನ್ ಗೆ ನೋಟಿಸ್: ಅರ್ಚಕರಿಗೆ ನೀಡಿದ್ದ ಸಂಬಳ ವಾಪಸ್ ಕೇಳಿದ ಸರ್ಕಾರ.

ಹಿರೇಮಗಳೂರು ಕಣ್ಣನ್ ಗೆ ನೋಟಿಸ್: ಅರ್ಚಕರಿಗೆ ನೀಡಿದ್ದ ಸಂಬಳ ವಾಪಸ್ ಕೇಳಿದ ಸರ್ಕಾರ.

ಚಿಕ್ಕಮಗಳೂರು, ಜನವರಿ,23,2024(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಅರ್ಚಕರಿಗೆ ನೀಡಿದ್ದ ವೇತನವನ್ನ ವಾಪಸ್ ಕೇಳಿದೆ. ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್  ಅವರಿಗೆ ವೇತನ ವಾಪಸ್ ನೀಡುವಂತೆ ನೋಟಿಸ್ ನೀಡಲಾಗಿದೆ.

ಹಿರೇಮಗಳೂರು ಕಣ್ಣನ್ ಅವರಿಗೆ ನೀಡಲಾಗುತ್ತಿರುವ ವೇತನವನ್ನೂ ತಡೆಹಿಡಿಯಲಾಗಿದ್ದು,  4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ಪಂಡಿತ, ಅರ್ಚಕ ಹಿರೇ ಮಗಳೂರು ಕಣ್ಣನ್​​ ಅವರಿಗೆ ಜಿಲ್ಲಾಡಳಿತ ನೋಟಿಸ್​​ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿರೇಮಗಳೂರು ಕಣ್ಣನ್ ಅವರು ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರ ವಲಯದಲ್ಲಿರುವ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ‌ ಇದೆ ಎಂದು ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ  ತಹಶಿಲ್ದಾರ್ ಸುಮಂತ್ ನೋಟಿಸ್​ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ತಿಂಗಳ ವೇತನವನ್ನು ತಡೆ ಹಿಡಿಯಲಾಗಿದೆ.

Key words: Notice – Hiremagaluru Kannan- Govt – return -salary – priests.