Tuesday, October 13, 2026

Dasara Wishes

Happy Dasara
Home Front Page ವಿಪಕ್ಷ ನಾಯಕ ಆರ್.ಅಶೋಕ್ ಬರುವ ಮುನ್ನವೇ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ.

ವಿಪಕ್ಷ ನಾಯಕ ಆರ್.ಅಶೋಕ್ ಬರುವ ಮುನ್ನವೇ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ.

ವಿಪಕ್ಷ ನಾಯಕ ಆರ್.ಅಶೋಕ್ ಬರುವ ಮುನ್ನವೇ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ.

ಬೆಂಗಳೂರು,ಜನವರಿ,29,2024(www.justkannada.in): ಮಂಡ್ಯದ ಕೆರೆಗೋಡುವಿನಲ್ಲಿ ಹನುಮಧ್ವಜ ಕೆಳಕ್ಕೆ ಇಳಿಸಿದ ಸರ್ಕಾರದ ನಡೆಯನ್ನ ಖಂಡಿಸಿ ಬಿಜೆಪಿ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದು ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧರಣಿ ನಡೆಸಿದೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.ವಿಪಕ್ಷ ನಾಯಕ ಆರ್.ಅಶೋಕ್ ಬರುವ ಮುನ್ನವೇ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್...

ಆದರೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಭಟನೆಗೆ ಬರುವ ಮುನ್ನವೇ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನ ಬಂಧಿಸಿದ್ದಾರೆ. ಬಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಆದರೂ ಪ್ರತಿಭಟನೆಗೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು.

Key words: before- arrival – opposition leader- R. Ashok- BJP workers -arrest