Sunday, August 23, 2026

BDA Apartments

Home Crime 1.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ.

1.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ.

ಬೆಂಗಳೂರು,ಜನವರಿ,31,2024(www.justkannada.in): 1.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಸ್ಕಾಂ ಜೆಇ ಪ್ರಕಾಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಬೆಂಗಳೂರಿನ ವಿಜಯನಗರದ ಬೆಸ್ಕಾಂ ಕಚೇರಿಯಲ್ಲಿ ಎಲೆಕ್ಟ್ರಿಕಲ್ ಗುತ್ತಿಗೆದಾರ ಮಂಜೇಶ್ ರಿಂದ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.

ಬಹುಮಹಡಿ ಕಟ್ಟಡಕ್ಕೆ ವಿದ್ಯುತ್  ಸಂಪರ್ಕ ನೀಡಲು ಎಲೆಕ್ಟ್ರಿಕಲ್ ಗುತ್ತಿಗೆದಾರ ಮಂಜೇಶ್ ಬಳಿ ಬೆಸ್ಕಾಂ ಜೆಇ  ಪ್ರಕಾಶ್ 2.5 ಲಕ್ಷ ರೂ.ವನ್ನು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.  ಇಂದು 1.5 ಲಕ್ಷ ರೂ ಲಂಚ ಸ್ವೀಕರಿಸುವ  ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಿಸಿ ಪ್ರಕಾಶ್ ಅವರನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Key words: 1.5 lakh Rs. – accepting –bribes- BESCOM –JE- Lokayukta