Sunday, September 27, 2026

BDA Apartments

Home Front Page ಅವಕಾಶ ಕೊಟ್ಟರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ- ಮಾಜಿ ಸಚಿವ ಡಾ.ಕೆ.ಸುಧಾಕರ್.

ಅವಕಾಶ ಕೊಟ್ಟರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ- ಮಾಜಿ ಸಚಿವ ಡಾ.ಕೆ.ಸುಧಾಕರ್.

ಚಿಕ್ಕಬಳ್ಳಾಪುರ,ಫೆಬ್ರವರಿ,5,2024(www.justkannada.in): ಅವಕಾಶ ಕೊಟ್ಟರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಮಾಡುತ್ತೇನೆ ಎಂದು  ಮಾಜಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾ.ಕೆ.ಸುಧಾಕರ್, ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗಳು ನೆಪಕ್ಕೆ ಮಾತ್ರ, ಲೋಕ ಸಭೆಯ ಎಲ್ಲ 543 ಕ್ಷೇತ್ರಗಳಲ್ಲೂ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಲಿರುವ ನರೇಂದ್ರ ಮೋದಿಯವರೇ ಅಭ್ಯರ್ಥಿ ಎಂದರು.ಅವಕಾಶ ಕೊಟ್ಟರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ sudhakar sudhakar 1

ನಾನು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಆಸೆ ಎಲ್ಲೂ ವ್ಯಕ್ತಪಡಿಸಿಲ್ಲ; ಆದರೆ ಅಭಿಮಾನಿ ಮತ್ತು ಬೆಂಬಲಿಗರನ್ನು ಸಮಾಧಾನಪಡಿಸಲು ಸ್ಪರ್ಧಿಸುತ್ತೇನೆ ಅಂತ ಹೇಳಬೇಕಾಗುತ್ತದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಹೊಂದಾಣಿಕೆಯಾಗಿದೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಣಯಕ್ಕೆ ನಾನು ಬದ್ಧ, ಲೋಕಸಭೆ ಚುನಾವಣೆಗೆ  ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ಸುಧಾಕರ್ ತಿಳಿಸಿದರು.

Key words: Contest – Lok Sabha-elections -given – chance – Former minister- Dr. K. Sudhakar.