Tuesday, September 22, 2026

BDA Apartments

Home Front Page ಸರ್ಕಾರ ಬೀಳಿಸುವುದೇ ಬಿಜೆಪಿಯ ಹುಟ್ಟುಗುಣ- ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ.

ಸರ್ಕಾರ ಬೀಳಿಸುವುದೇ ಬಿಜೆಪಿಯ ಹುಟ್ಟುಗುಣ- ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ.

ಮೈಸೂರು,ಫೆಬ್ರವರಿ,6,2024(www.justkannada.in): ಬಿಜೆಪಿ ತನಿಖಾ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸರ್ಕಾರ ಬೀಳಿಸುವುದು ಬಿಜೆಪಿಯ ಹುಟ್ಟುಗುಣ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಗರಿಗೆ ಮೋದಿ ಎದುರು ಮಾತನಾಡುವ ಧೈರ್ಯವಿಲ್ಲ.  ಪರಿಹಾರ ರೀಲಿಸ್ ಮಾಡಿದ್ದರೇ ಪ್ರತಿಭಟನೆ ಮಾಡುತ್ತಿರಲಿಲ್ಲ. ಬಿಜೆಪಿ ಮಾಡುವುದೆಲ್ಲಾ ಅಧರ್ಮದ ಕೆಲಸ. ನಾವು ಅನಿವಾರ್ಯವಾಗಿ ಪ್ರತಿಭಟನೆ ಮಾಡುತ್ತಿದೆ ಎಂದು ಹೇಳಿದರು.ಸರ್ಕಾರ ಬೀಳಿಸುವುದೇ ಬಿಜೆಪಿಯ ಹುಟ್ಟುಗುಣ dinesh gundurao

ಮೋದಿ ಪ್ರಧಾನಿ ಅದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ದೇಶದಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ. ಅವರ ವಿರುದ್ಧ ಮಾತನಾಡಿದವರನ್ನ ಹೆದರಿಸುವ ಕೆಲಸ ನಡೆಯುತ್ತಿದೆ. ಬಿಜೆಪಿಯವರೇ ಬಿಜೆಪಿ ವರಿಷ್ಟರನ್ನು ಪ್ರಶ್ನಿಸುವಂತಿಲ್ಲ ಎಂದು ದಿನೇಶ್ ಗುಂಡೂರಾವ್ ಹರಿಹಾಯ್ದರು.

Key words: Bringing down -government – nature – BJP – Minister -Dinesh Gundurao