Sunday, November 8, 2026

Dasara Wishes

Happy Dasara
Home Front Page ಈಶ್ವರಪ್ಪಗೆ ಪ್ರತ್ಯೇಕ ಕಾನೂನು ಮಾಡಲು ಹೇಳಿ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿ.

ಈಶ್ವರಪ್ಪಗೆ ಪ್ರತ್ಯೇಕ ಕಾನೂನು ಮಾಡಲು ಹೇಳಿ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿ.

ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಬೆಂಗಳೂರು, ಫೆಬ್ರವರಿ,9,2024(www.justkannada.in): ‘ದೇಶ ವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂಬ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆಎಸ್​.ಈಶ್ವರಪ್ಪ ವಿರುದದ್ಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈಶ್ವರಪ್ಪರಿಗೆ ಪ್ರತ್ಯೇಕ ಕಾನೂನು ಮಾಡಲು ಹೇಳಿ, ಈ ಕಾನೂನು ಮೀರಿ ಯಾರು ಕೂಡ ವರ್ತಿಸಬಾರದು ಎಂದು ಹರಿಹಾಯ್ದರು.ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಕೋಮುಸೌಹಾರ್ದತೆ ಕದಡುವವರನ್ನು ನೋಡಿ ಸುಮ್ಮನೆ ಕೂರಲ್ಲ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಚಕ್ರವರ್ತಿ ಸೂಲಿಬೆಲೆ ಅಷ್ಟೇ ಅಲ್ಲ, ಯಾರೇ ಈ ರೀತಿ ಹೇಳಿಕೆ ಕೊಟ್ಟರೂ ಅಂಥವರ ವಿರುದ್ಧ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

Key words:  Eshwarappa – separate law – Home Minister -Dr. G. Parameshwar