Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ನನ್ನನ್ನ ಯಾರೂ ಏನು ಮಾಡೋಕಾಗಲ್ಲ –ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

ನನ್ನನ್ನ ಯಾರೂ ಏನು ಮಾಡೋಕಾಗಲ್ಲ –ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

ರಾಮನಗರ,ಸೆ,11,2019(www.justkannada.in): ಮುಂದೆ ಕುಮಾರಸ್ವಾಮಿಯನ್ನು ಬಂಧಿಸುತ್ತಾರೆಂದು ಹೇಳುತ್ತಿದ್ದಾರೆ. ಆದರೆ ಈ ಕುಮಾರಸ್ವಾಮಿಯನ್ನ ಯಾರು ಏನು ಮಾಡೋಕಾಗಲ್ಲ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದರು.

ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ಕುರಿತು ಚನ್ನಪಟ್ಟಣದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಚನ್ನಪಟ್ಟಣದಲ್ಲಿನ ಕಾರ್ಯಕ್ರಮ ಈ ಮೊದಲೇ ನಿಗಧಿಯಾಗಿತ್ತು. ಹಾಗಾಗಿ ಬೆಂಗಳೂರಿನ ಪ್ರತಿಭಟನೆಗೆ ನನಗೆ ಆಹ್ವಾನವಿರಲಿಲ್ಲ. ಆದರೂ ಕೂಡ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನನಗೆ ಮೊದಲೇ ಆಹ್ವಾನ ನೀಡಿದ್ದರೆ ನಾನು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದೆ ಎಂದರು.

ಇನ್ನು ಕಾರ್ಯಕ್ರಮದ ಜಾಹಿರಾತಿನಲ್ಲಿ ನನ್ನ ಫೋಟೋ ಕೂಡ ಹಾಕಿದ್ದಾರಂತೆ. ಮುಂದೆ ಕುಮಾರಸ್ವಾಮಿಯನ್ನು ಬಂಧಿಸುತ್ತಾರೆಂದು. ಆದರೆ ಈ ಕುಮಾರಸ್ವಾಮಿಯನ್ನ ಯಾರು ಏನು ಮಾಡೋಕಾಗಲ್ಲ. ನನ್ನನ್ನ ಪ್ರಕರಣದಲ್ಲಿ ಸಿಲುಕಿಸಲು ಆಗಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿದರು.

Key words: Nobody –can- do- anything-Former CM- HD Kumaraswamy -chennapatna